ಪಟಾಕಿ ಸಿಡಿತದಿಂದ ಗಂಭೀರ ಗಾಯಗೊಂಡಿದ್ದ 7 ತಿಂಗಳ ಗರ್ಭಿಣಿ ಅಶ್ವಿನಿ ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಟಾಕಿ ಸಿಡಿತದಿಂದ ಗಾಯಗೊಂಡು ಕಳೆದ ಒಂದು ವಾರದಿಂದ ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸತತ ಹೋರಾಟದ ಬಳಿಕ ಸಾವನ್ನಪ್ಪಿದ್ದಾರೆ. ಬೆಂಗಳೂರು, ನವೆಂಬರ್ 18: ನಗರದಲ್ಲಿ ಪಟಾಕಿ ಸಿಡಿತದ ದುರಂತಕ್ಕೆ ಮತ್ತೊಂದು ಬಲಿ ಆಗಿದೆ. ಪಟಾಕಿ ಸಿಡಿತದಿಂದ ಗಂಭೀರವಾಗಿ ಗಾಯಗೊಂಡಿದ್ದ 7 ತಿಂಗಳ ಗರ್ಭಿಣಿ ಅಶ್ವಿನಿ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಶೇ.40ರಷ್ಟು ದೇಹ ಸುಟ್ಟು, ಕಳೆದ ಎಂಟು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರ ಜೀವ ಕೊನೆಗೂ ಉಳಿಯಲಿಲ್ಲ.