‘ಆಯುಷ್’ ಸಿನಿಮಾಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ವಿವಾದ ಸೃಷ್ಟಿ ಆಗಿತ್ತು. ಪ್ರಿಯಾಂಕಾ ಉಪೇಂದ್ರ ಮತ್ತು ನಿರ್ದೇಶಕ ಪುರುಷೋತ್ತಮ್ ನಡುವೆ ಮನಸ್ತಾಪ ಉಂಟಾಗಿತ್ತು. ಈ ವಿವಾದವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೆಟ್ಟಿಲು ಏರಿತ್ತು. ಅಲ್ಲಿಯೇ ಈಗ ರಾಜಿ, ಸಂಧಾನ ಮಾಡಲಾಗಿದೆ. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಪುರುಷೋತ್ತಮ್ ಅವರು ಪ್ರಿಯಾಂಕಾ ಉಪೇಂದ್ರ ಅವರ ಕ್ಷಮೆಯನ್ನು ಕೇಳಿದರು. ‘ನನ್ನಿಂದ ಪ್ರಿಯಾಂಕಾ ಮೇಡಂ ಅವರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ’ ಎಂದು ಪುರುಷೋತ್ತಮ್ ಹೇಳಿದ್ದಾರೆ. ತಮ್ಮಲ್ಲೇ ವಿವಾದ ಬಗೆಹರಿಸಿಕೊಳ್ಳುವ ಬದಲು ಸಾರ್ವಜನಿಕವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಕ್ಕಾಗಿಯೂ ಪುರುಷೋತ್ತಮ್ ಕ್ಷಮೆ ಕೇಳಿದ್ದಾರೆ ಎಂದು ಜಯಮಾಲಾ ಅವರು ಮಾಹಿತಿ ನೀಡಿದರು.