ಇರಾನ್ ಸರ್ಕಾರದೊಂದಿಗೆ ನಂಟು ಹೊಂದಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಹತ್ಯೆ ಮಾಡಲು ಸಂಚು ರೂಪಿಸಿದ ಪ್ರಕರಣದಲ್ಲಿ 27 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಾಜಿ ಅಧ್ಯಕ್ಷ ಜೋ ಬೈಡನ್ ಮತ್ತು ವಿಶ್ವಸಂಸ್ಥೆಯ ಅಮೆರಿಕದ ಮಾಜಿ ರಾಯಭಾರಿ ನಿಕ್ಕಿ ಹ್ಯಾಲಿ ಅವರನ್ನು ಹತ್ಯೆ ಮಾಡಲು ಬಾಡಿಗೆ ಹಂತಕರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಿದ ಆರೋಪದ ಮೇಲೆ ಆಸಿಫ್ ಮರ್ಚೆಂಟ್ ಎಂಬಾತ ದೋಷಿ ಎಂದು ತೀರ್ಪು ನೀಡಲಾಗಿತ್ತು.