ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಯ ಜೀವನಾಡಿ ತುಂಗಭದ್ರಾ ನದಿ ನೀರು ಕಾಲುವೆಗೆ ಹರಿಸುವ ಬಗ್ಗೆ ಬುಧವಾರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ನವೆಂಬರ್ 28ರವರೆಗೂ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಇದರಿಂದಿಗೆ ಆತಂಕಗೊಂಡಿದ್ದ ರೈತರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರು, ನವೆಂಬರ್ 18: ಕರ್ನಾಟಕದಲ್ಲಿ ಜಲಸಂಘರ್ಷ ತಾಂಡವವಾಡುತ್ತಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ರೈತರು ಪ್ರತಿಭಟಿಸಿದ್ದರು. ಹೀಗಾಗಿ ಇಂದು ವಿಕಾಸಸೌಧದಲ್ಲಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ ಮಹತ್ವದ ಸಭೆ ಮಾಡಲಾಗಿದ್ದು, ನವೆಂಬರ್ 28ರವರೆಗೆ ಕಾಲುವೆಗಳಿಗೆ 3,000 ಕ್ಯೂಸೆಕ್ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ.