ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪಟ್ಟಣದ ವಿಜಯಪುರ ಕ್ರಾಸ್ ಬಳಿಯಿರುವ ಯೂನಿಯನ್ ಬ್ಯಾಂಕ್ ಬಳಿ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿಯ ಶವ ಪತ್ತೆಯಾಗಿದೆ. ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ದೇವನಹಳ್ಳಿ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ದೇವನಹಳ್ಳಿ, ನವೆಂಬರ್ 18: ಬೆಂಗಳೂರಿನ ಮಂಗಳವಾರ ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿತ್ತು. ಇದೀಗ ಅಂತಹದೊಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. ಬ್ಯಾಂಕ್ ಮುಂದೆ ಮೂರು ದಿನಗಳಿಂದ ನಿಂತಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.