ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು(ನವೆಂಬರ್ 18) ಆದೇಶ ಹೊರಡಿಸಿದೆ. ಇನ್ನು ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಆರ್ ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಅದರಂತೆ ಆರ್ ಹಿತೇಂದ್ರ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿದರು.