ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ರಾಜಕೀಯ ವರ್ಚಸ್ಸು ಕ್ಷೀಣಿಸಿದೆ ಎಂಬ ಮಾತುಗಳ ಹಾಗೂ ಚರ್ಚೆಗಳ ನಡುವೆ, ನವೆಂಬರ್ 26ರಂದು ಮೈಸೂರಿನಲ್ಲಿ ಬೃಹತ್ ಸಂವಿಧಾನ ದಿನಾಚರಣೆ ಆಯೋಜಿಸಿದ್ದಾರೆ. ಇದರ ಮೂಲಕ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದು, ಈ ಕಾರ್ಯಕ್ರಮ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬೆಂಗಳೂರು, ನವೆಂಬರ್ 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಿಂದ ಕೆಳಗಿಳಿದ ನಂತರವೂ ತಮ್ಮ ಖದರ್ ಬಿಟ್ಟುಕೊಟ್ಟಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ವರ್ಚಸ್ಸು ಕ್ಷೀಣಿಸುತ್ತಿದೆ ಎಂಬ ಮಾತುಗಳ ಹಾಗೂ ಗುಸುಗುಸುಗಳ ನಡುವೆ, ಸಿದ್ದರಾಮಯ್ಯ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.