ದೀಪಾವಳಿ ಪಟಾಕಿ ಪ್ರಕರಣದಲ್ಲಿ ಮಣಿಪಾಲ ಪೊಲೀಸರ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಮಾಯಕ ವಿದ್ಯಾರ್ಥಿಗಳ ಫ್ಲ್ಯಾಟ್ಗೆ ನುಗ್ಗಿ ಹಲ್ಲೆ ನಡೆಸಿ, ಸುಳ್ಳು ಎಫ್ಐಆರ್ ದಾಖಲಿಸಿದ್ದಾರೆಂದು ವಿದ್ಯಾರ್ಥಿಗಳು ಸಿಎಂಗೆ ದೂರು ನೀಡಿದ್ದಾರೆ. ಪರೀಕ್ಷೆಗೆ ಸಿದ್ಧರಾಗಿದ್ದ ವಿದ್ಯಾರ್ಥಿಗಳಿಗೆ ದೈಹಿಕ, ಮಾನಸಿಕ ಹಿಂಸೆ ನೀಡಲಾಗಿದೆ. ನ್ಯಾಯಕ್ಕಾಗಿ ಸಿಎಂ ಮಧ್ಯಪ್ರವೇಶಕ್ಕೆ ಮನವಿ. ಉಡುಪಿ, ನ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ಗಂಭೀರ ದೌರ್ಜನ್ಯದ ಆರೋಪ ಕೇಳಿಬಂದಿದೆ. ಸಾರ್ವಜನಿಕ ರಸ್ತೆಯಲ್ಲಿ ಯಾರೋ ಕಿಡಿಗೇಡಿಗಳು ಮಾಡಿದ ಕೃತ್ಯಕ್ಕೆ ಸಂಬಂಧವಿಲ್ಲದ, ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಅಮಾಯಕ ವಿದ್ಯಾರ್ಥಿಗಳ ಫ್ಲ್ಯಾಟ್ಗೆ ನುಗ್ಗಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.