IND vs NZ 1st Test: ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ವೆಲ್ಲಿಂಗ್ಟನ್ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಆರಂಭವಾಗಿದೆ. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದು, ಆತಿಥೇಯ ನ್ಯೂಝಿಲೆಂಡ್ ತಂಡ ಮೊದಲ ಇನಿಂಗ್ಸ್ ಆಡುತ್ತಿದೆ. ವೆಲ್ಲಿಂಗ್ಟನ್ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ ಡಿಆರ್ಎಸ್ (DRS) ತೀರ್ಪೊಂದು ಭಾರಿ ವಿವಾದಕ್ಕೆ ಕಾರಣವಾಗಿದೆ.