ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಈವರೆಗೆ ಒಟ್ಟು 65 ಟೆಸ್ಟ್ ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 22 ಪಂದ್ಯಗಳನ್ನು ಗೆದ್ದು ಮೇಲುಗೈ ಸಾಧಿಸಿದರೆ, ನ್ಯೂಝಿಲೆಂಡ್ 16 ಪಂದ್ಯಗಳಲ್ಲಿ ಜಯಗಳಿಸಿದೆ. ಉಳಿದ 27 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಇದೀಗ ಉಭಯ ತಂಡಗಳ ನಡುವೆ 66ನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ರೋಚಕ ಕದನದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಿಂದ ಸ್ಟಾರ್ ಆಟಗಾರರಾದ ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ಅವರನ್ನು ಕೈಬಿಡುವ ಮೂಲಕ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಅಚ್ಚರಿಯ ನಿರ್ಧಾರ ಕೈಗೊಂಡಿದೆ.