ಬೆಂಗಳೂರು : ಜಗತ್ತಿಗೆ ಸಮಾನತೆ, ಕಾಯಕ ಮತ್ತು ದಾಸೋಹದ ಮಹತ್ವವನ್ನು ಸಾರಿದ ಮಹಾನ್ ಮಾನವತಾವಾದಿ ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕರು ಮಾತ್ರವಲ್ಲ, ಇಡೀ ವಿಶ್ವದ ಗೌರವಕ್ಕೆ ಪಾತ್ರರಾದ ವಿ. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡುವುದು, ಬರೆಯುವುದು, ಕೀಳುಮಟ್ಟದ ಹೇಳಿಕೆಗಳನ್ನು ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.ಬಸವ ಸಮಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೇಖಕ ರವಿ ಹಂಜ್ ಅವರು ರಚಿಸಿ, ವಿಶ್ವವಾಣಿ ಪ್ರಕಾಶನ ಪ್ರಕಟಿಸಿರುವ ‘ಬಸವ ಮಂಟಪ’ ಕೃತಿ ಬಿಡುಗಡೆಗೂ ಮುನ್ನ ನೀಡಿರುವ ಸಂದರ್ಶನದಲ್ಲಿನ ಬಸವಣ್ಣನವರ ವ್ಯಕ್ತಿತ್ವಕ್ಕೆ ಕಳಂಕ ತರುವ ರೀತಿಯಲ್ಲಿ ಮಾತನಾಡಿದ್ದಾರೆ.