ಮಾಯಕೊಂಡ: ಆನಗೋಡು ಹೋಬಳಿಯ ಗುಡಾಳ್ ಗ್ರಾಮದ ಜನರ ಕುಡಿಯುವ ನೀರಿನ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಕೆ.ಎಸ್. ಬಸವಂತಪ್ಪ, ಖಾಸಗಿ ಬೋರ್ವೆಲ್ ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡುವ ಮೂಲಕ ಸ. ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮನೆಗಳಿದ್ದು, ಇಡೀ ಗ್ರಾಮಕ್ಕೆ ಒಂದೇ ಬೋರ್ವೆಲ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿತ್ತು. ಆದರೆ, ಈ ಬೋರ್ವೆಲ್ನಿಂದ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿರಲಿಲ್ಲ. ಹೀಗಾಗಿ ಆಕ್ರೋಶಗೊಂಡ ಗ್ರಾಮಸ್ಥರು ಮಂಗಳವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದರು.ವಿಷಯ ತಿಳಿದ ಸಚಿವ ಕೆ.ಎಸ್. ಬಸವಂತಪ್ಪ, ಬುಧವಾರ ಗುಡಾಳ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿ, ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಕಾರ್ಯಪ್ರವೃತ್ತರಾದರು.