ಹಿರಿಯೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಗರದ ನೆಹರೂ ಮೈದಾನದಲ್ಲಿ ನ.21ರಂದು ಶನಿವಾರ ಬೆಳಗ್ಗೆ 11ಕ್ಕೆ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಲೋಪವಾಗದಂತ. ರಮ್ಯಾ ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ನಗರಸಭೆ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳು ಕಾರ್ಯಕ್ರಮದ ವೇಳೆ ಪ್ರತಿ ಮಳಿಗೆಗೂ ಭೇಟಿ ನೀಡಿ ಪರಿಶೀಲಿಸುವುದರಿಂದ, ಎಲ್ಲ ಇಲಾಖೆಗಳು ತಮ್ಮ ಇತ್ತೀಚಿನ ಯೋಜನೆಗಳು ಮತ್ತು ಸಾಧನೆಗಳನ್ನು ಅರ್ಥಪೂರ್ಣವಾಗಿ ಪ್ರದರ್ಶಿಸಬೇಕು. ಸಾರ್ವಜನಿಕರಿಗೆ ಉಪಯುಕ್ತವಾಗುವಂತಹ ಮಾಹಿತಿ ಮತ್ತು ಪ್ರಾತ್ಯಕ್ಷಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.