ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ನೌಕರರಿಗೆ ಸಂಬಳ ನೀಡಲು ಹಣವಿಲ್ಲ, ಪಿಂಚಣಿ ಹಣ ಸಹ ನೀಡುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಇದರ ಮಧ್ಯೆ ವಿದ್ಯಾರ್ಥಿಗಳ ಬಿಸಿಯೂಟಕ್ಕೆ ಸರ್ಕಾರಿ ಶಾಲೆಗಳಿಗೆಅಕ್ಕಿ ಒದಗಿಸಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸುವೆ. ಇದಕ್ಕೆ ಪೂರಕವೆಂಬಂತೆ ಹಾವೇರಿ ಜಿಲ್ಲೆಯಲ್ಲಿ ಒಂದು ಘಟನೆ ನಡೆದಿದೆ. ಹಾವೇರಿ, ನವೆಂಬರ್ 19: ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಅಕ್ಕಿ ಸರಬರಾಜು ಮಾಡದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ 15 ದಿನಗಳಿಂದ ಬಿಸಿಯೂಟ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.