ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರು ಗ್ರಾಮದಲ್ಲಿ 65 ವರ್ಷದ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಶ್ರಯ ಕೊಟ್ಟ ಮನೆ ಮಾಲೀಕನನ್ನೇ ಕೊಲೆ ಮಾಡಿ, ಎರಡು ಟ್ರಂಕ್ಗಳಲ್ಲಿ ಹಾಕಿ ಬಾವಿಗೆ ಎಸೆಯಲಾಗಿದ್ದು, ಇದೀಗ ಶವ ಪತ್ತೆ ಆಗಿದೆ. ಬಾಗಲಕೋಟೆ, ನವೆಂಬರ್ 19: ನಗರದಲ್ಲಿ 65 ವರ್ಷದ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆಯಾದ ಸ್ಥಿತಿಯಲ್ಲಿ ಎರಡು ಟ್ರಂಕ್ನಲ್ಲಿ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಸಾಲದ ಹಣ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿ, ದೇಹವನ್ನು ಮೂರು ಭಾಗಗಳಾಗಿ ತುಂಡರಿಸಿ ಟ್ರಂಕ್ಗಳಲ್ಲಿ ತುಂಬಿ ಬಾವಿಗೆ ಎಸೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.