ಬೇಲೂರು: ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ 9ನೇ ವರ್ಷದ ವಾರ್ಷಿಕೋತ್ಸವವನ್ನು 2027ರ ಜನವರಿ 4, 5 ಮತ್ತು 6ರಂದು ಆಚರಿಸಲು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ನಿಂದ ತೀರ್ಮಾನಿಸಲಾಗಿದೆ ಎಂದು ಶ. ನಾಡಿಗೆ ಉತ್ತಮ ಮಳೆ-ಬೆಳೆ ಕರುಣಿಸುವಂತೆ ಸ್ವಾಮಿಯಲ್ಲಿ ಪ್ರಾರ್ಥಿಸಲಾಗುವುದು ಎಂದರು.ಟ್ರಸ್ಟ್ ಕಾರ್ಯದರ್ಶಿ ಯಮಸಂದಿ ಪಾಪಣ್ಣ ಮಾತನಾಡಿ, ದಕ್ಷಿಣ ಭಾರತದಲ್ಲೇ ಮಾದರಿಯಾಗಿರುವಂತ ಈ ದೇವಸ್ಥಾನದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಜ.4 ರಂದು ಚನ್ನಕೇಶವಸ್ವಾಮಿ ದೇವಸ್ಥಾನದಿಂದ ಅಯ್ಯಪ್ಪ ಸ್ವಾಮಿಯ ಆಭರಣವನ್ನು ಮೆರವಣಿಗೆಯಲ್ಲಿ ತಂದು ಸ್ವಾಮಿಗೆ ಅರ್ಪಿಸಲಾಗುವುದು. ಜ.5,6 ರಂದು ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನ ನೆರವೇರಲಿದೆ. ನಂತರ ಜ.