ಚನ್ನರಾಯಪಟ್ಟಣ: ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ವಿಶಿಷ್ಟ ಪ್ರತಿಭೆ ಅಡಗಿರುತ್ತದೆ. ಅಂತಹ ಪ್ರತಿಭೆಯನ್ನು ಗುರುತಿಸಿ, ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಪ್ರೋತ್ಸಾಹಿಸುವ ಕಾರ್ಯವು ಪ್ರತಿಭಾ. ಮಕ್ಕಳಲ್ಲಿರುವ ಸೃಜನಶೀಲತೆ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಅಭಿರುಚಿಯನ್ನು ಗುರುತಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ತನ್ನದೇ ಆದ ಸಾಮರ್ಥ್ಯವಿದ್ದು, ಅದನ್ನು ಹೊರತರುವ ನಿಟ್ಟಿನಲ್ಲಿ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕು. ನಮ್ಮ ಸಂಸ್ಕೃತಿಯ ಬೇರುಗಳು ಆಚರಣೆ ಮತ್ತು ಸಂಪ್ರದಾಯಗಳಲ್ಲಿಯೇ ಅಡಕವಾಗಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಹೇಳಿದರು.ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಅನಿಲ್ ಮಾತನಾಡಿ, ಬದುಕಿನಲ್ಲಿ ಯಶಸ್ಸು ಸಾಧಿಸಲು ಸೃಜನಶೀಲತೆ ಅತ್ಯಗತ್ಯ.