ಬೆಂಗಳೂರು: ಇಂದಿನ ಜಗತ್ತು ತಾತ್ಕಾಲಿಕ ಮನರಂಜನೆಯ ಕಡೆ ಸಾಗುತ್ತಿದ್ದು, ಜಾಗತೀಕರಣದ ಮೇಲೆ ಪ್ರಭಾವ ಬೀರುತ್ತಿದೆ. ಇದರ ತಡೆಗೆ ಮರು ಚಿಂತನೆ ಹಾಗೂ ಮೌಲ್ಯವಾಪನಗಳು ನಿರಂತರವಾಗಿ ನಡೆಯಬೇಕಿದೆ. ಆಗ ವ. ಆಗ ವಾತ್ರ ಸಾಹಿತ್ಯ ಮತ್ತು ಸಾಂಸ್ಕೃತಿಕ ಜೀವಂತಿಕೆಯನ್ನು ಕಾಪಾಡಲು ಸಾಧ್ಯ ಎಂದು ಶ್ರೀ ನಿಡುಮಾಮಿಡಿ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಮಹಾಸ್ವಾಮಿ ಹೇಳಿದ್ದಾರೆ.ನಗರದ ಕೃಷ್ಣರಾಜ ಪರಿಷನ್ಮಂದಿರ ಸಭಾಂಗಣದಲ್ಲಿ ಡಾ.ಎಸ್.ವಿದ್ಯಾಶಂಕರ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಬಿ.ನಂಜುಂಡಸ್ವಾಮಿ ಅವರಿಗೆ ವಿದ್ಯಾಶಂಕರ ಪ್ರಶಸ್ತಿ ಹಾಗೂ ಡಾ.ಸಫ್ರಾಜ್ ಚಂದ್ರಗುತ್ತಿ ಅವರಿಗೆ ವಿದ್ಯಾಶಂಕರ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.