ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ಹಾಲಪ್ಪ ಫೌಂಡೇಶನ್ ವತಿಯಿಂದ "ಯುವಜನರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ದಿಕ್ಸೂಚಿ ಕಾರ್ಯಾಗಾರ'ವನ್ನು ನ.20 ಹಾಗೂ 21 ರಂದು ಹಮ್ಮಿಕೊ. ವಿವಿಯ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆಯಲಿರುವ 2 ದಿನಗಳ ಕಾರ್ಯಾಗಾರಕ್ಕೆ 20 ರಂದು ಬೆಳಗ್ಗೆ 9.30ಕ್ಕೆ ಚಾಲನೆ ದೊರೆಯಲಿದೆ. ಬೆಳಗ್ಗೆ 9 ರಿಂದ ಸಂಜೆ 4.30ರವರೆಗೆ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಡಿಪ್ಲಮೊ, ಪದವಿ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ನಿರುದ್ಯೋಗಿ ಯುವಜನರು ಭಾಗವಹಿಸಿ ತಜ್ಞ ಅಧ್ಯಾಪಕರು, ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.