ಭಾರತದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಟಿ20 ಕ್ರಿಕೆಟ್ನಲ್ಲಿ 400 ವಿಕೆಟ್ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಇತಿಹಾಸ ಸೃಷ್ಟಿಸಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಹರಿಯಾಣ ಪರ ಆಡುತ್ತಿದ್ದಾಗ ತಮಿಳುನಾಡು ವಿರುದ್ಧದ ಪಂದ್ಯದಲ್ಲಿ 3/16 ಪ್ರದರ್ಶನ ನೀಡಿ ಈ ಮೈಲಿಗಲ್ಲು ತಲುಪಿದರು. ಈ ಮೂಲಕ ಅವರು ಭಾರತದ ಶ್ರೇಷ್ಠ ಟಿ20 ಬೌಲರ್ಗಳಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಭಾರತದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಬುಧವಾರ ಟಿ20 ಕ್ರಿಕೆಟ್ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟಿ20 ಮಾದರಿಯಲ್ಲಿ 400 ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.