ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಮೊದಲ ಪಟ್ಟಿಯಲ್ಲಿ 60 ಪ್ರಮುಖ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ 428 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಿ ಅಧಿಕೃತ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಬಿಡುಗಡೆ ಮಾಡಿದ್ದು, ಇದರಲ್ಲಿ 81 ಮಂದಿ ನೇಮಕ ಮಾಡಲಾಗಿದೆ. 2ನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಅವಕಾಶ? ಸಿಕ್ಕಿದೆ ಎನ್ನುವ ವಿವರ ಇಲ್ಲಿದೆ. ಬೆಂಗಳೂರು, (ನವೆಂಬರ್ 19): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಕಾರ್ಯಕರ್ತರು ಕಾತರದಿಂದ ಕಾಯುತ್ತಿದ್ದ ನಿಗಮ-ಮಂಡಳಿಗಳ ನೇಮಕಾತಿ ನಡೆದಿದ್ದು, ಈಗಾಗಲೇ ಮೊದಲ ಪಟ್ಟಿಯಲ್ಲಿ ಬರೋಬ್ಬರಿ 428 ಮಂದಿಯನ್ನು ನೇಮಕ ಮಾಡಲಾಗಿದೆ.