ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹಗಳಿವೆ ಎಂಬ ಆರೋಪದಿಂದ ‘ಬಸವ ಮಂಟಪ’ ಕೃತಿ ವಿವಾದ ಭುಗಿಲೆದ್ದಿದೆ. ಲೇಖಕ ರವಿ ಹಂಜ್ ಮತ್ತು ಪತ್ರಕರ್ತ ವಿಶ್ವೇಶ್ವರ್ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೃತಿ ಮುಟ್ಟುಗೋಲಿಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿದ್ದು, ಬಸವಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ವಿವಾದದ ಬೆನ್ನಲ್ಲೇ ರವಿ ಹಂಜ್ ಕ್ಷಮೆಯಾಚಿಸಿ ಕೃತಿ ಮರುಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.