ಬಸವಣ್ಣ ಕುರಿತ ಹೇಳಿಕೆಗಳಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ನೋವಾಗಿದ್ದಕ್ಕೆ ಲೇಖಕ ರವಿ ಹಂಜ್ ಕ್ಷಮೆಯಾಚಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಅವರು, ಬಸವ ಮಂಟಪ ಕೃತಿಯನ್ನು ಪ್ರತಿ ಜಿಲ್ಲೆಯಲ್ಲಿ ಮರು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು, ನವೆಂಬರ್ 20: ‘ಬಸವ ಮಂಟಪ’ ಕೃತಿಯಲ್ಲಿ ಜಗಜ್ಯೋತಿ ಬಸವಣ್ಣನವರನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪಗಳ ಬೆನ್ನಲ್ಲೇ ಕೃತಿಯನ್ನು ಮುಟ್ಟುಗೋಲು ಹಾಕಲು ಕರ್ನಾಟಕ ಸಚಿವ ಸಂಪುಟ ಗುರುವಾರ ಸಮ್ಮತಿಸಿದೆ.