ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣದ ವಿಚಾರವಾಗಿ ಮೊಮ್ಮಗನೇ 78 ವರ್ಷದ ಅಜ್ಜಿಯನ್ನು ಕೊಲೆ ಮಾಡಿದ್ದಾನೆ. ಹಮ್ಮವ್ವ ಸನದಿ ಅವರನ್ನು ಉಸಿರುಗಟ್ಟಿಸಿ ಕೊಂದ ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ ಬೈಕ್ಗೆ ಕಟ್ಟಿಕೊಂಡು 15 ಕಿ.ಮೀ. ಸಾಗಿಸಿ ಹಿಡಕಲ್ ಡ್ಯಾಂ ಹಿನ್ನೀರಿನಲ್ಲಿ ಎಸೆದಿದ್ದಾನೆ. ಬೆಳಗಾವಿ, ನವೆಂಬರ್ 20: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣಕ್ಕಾಗಿ ಮೊಮ್ಮಗನೇ ಅಜ್ಜಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ.