ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. 15,000 ರೂ. ಗೌರವಧನ ಹೆಚ್ಚಳ ಹಾಗೂ ಲಿಖಿತ ಭರವಸೆಗೆ ಆಗ್ರಹಿಸಿ, ಕೊರೆಯುವ ಚಳಿಯಲ್ಲೂ ಮಕ್ಕಳೊಂದಿಗೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ಮನವಿಯ ಹೊರತಾಗಿಯೂ, ಆಶಾ ಕಾರ್ಯಕರ್ತೆಯರು ತಮ್ಮ ಹೋರಾಟವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಬೆಂಗಳೂರು, ನವೆಂಬರ್ 20: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ತಲುಪಿದೆ. 15,000 ರೂಪಾಯಿ ಗೌರವಧನ ಹೆಚ್ಚಳವೇ ಅವರ ಪ್ರಮುಖ ಬೇಡಿಕೆಯಾಗಿದೆ. ಕೊರೆಯುವ ಚಳಿಯಲ್ಲಿ, ಪುಟ್ಟ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.