ಮೈಸೂರು: ನಗರದ ದೊಡ್ಡಕೆರೆ ಮೈದಾನದಲ್ಲಿ ಆಯೋಜಿಸಿರುವ ದಸರಾ ವಸ್ತುಪ್ರದರ್ಶನದಲ್ಲಿ ಸಾಂಪ್ರದಾಯಿಕ ಜಾನಪದ ಕಲೆಯಾದ ದಾಂಡಿಯಾ ನೃತ್ಯ ಮನಸೂರೆಗೊಳಿಸಿತು.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ. ಕಾಳಿಂಗರಾವ್ ಗಾನಮಂಟಪದಲ್ಲಿ ಆಯೋಜಿಸಲಾಗಿತ್ತು.ದಸರಾ ವಸ್ತುಪ್ರದರ್ಶನದ ವೀಕ್ಷಣೆಗೆ ಬಂದ ಪ್ರವಾಸಿಗರು, ಸಾರ್ವಜನಿಕರು, ದಾಂಡಿಯಾ ನೃತ್ಯವನ್ನು ಕಣ್ತುಂಬಿಕೊಂಡರು.ಗುಜರಾತ್ ರಾಜ್ಯದಲ್ಲಿ ಹುಟ್ಟಿ, ದೇಶಾದ್ಯಂತ ಜನಪ್ರಿಯತೆ ಗಳಿಸಿರುವ ದಾಂಡಿಯಾವನ್ನು ಮೈಸೂರಿನ ಜನರಿಗೆ, ಪ್ರವಾಸಿಗರಿಗೆ ಪರಿಚಯ ಮಾಡಿಕೊಡಲಾಯಿತು. ಉತ್ತರ ಭಾರತದಲ್ಲಿ ವಿಶೇಷವಾಗಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ದಾಂಡಿಯಾ ನೃತ್ಯವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ದಸರಾ ವಸ್ತುಪ್ರದರ್ಶನದಲ್ಲೂ ಈ ಕಲೆಯನ್ನು ಪ್ರದರ್ಶಿಸಿ ಪ್ರೇಕ್ಷಕರ ಕಣ್ಮನ ಸೆಳೆಯಲಾಯಿತು.