Toxic Release: ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಫ್ಯಾನ್ಸ್ ಶೋಗಳಿಗೆ ಜನಸಾಗರವೇ ಹರಿದುಬಂದಿದ್ದು, ಬಾಕ್ಸ್ ಆಫೀಸ್ನಲ್ಲಿ ನೂತನ ಇತಿಹಾಸ ಸೃಷ್ಟಿಯಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 12,000 ಸ್ಕ್ರೀನ್ಗಳಲ್ಲಿ (1200 Screen) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಮುಂಜಾನೆಯಿಂದಲೇ ಚಿತ್ರಮಂದಿರಗಳ ಬಳಿ ಅಭಿಮಾನಿಗಳು ಪಟಾಕಿ ಸಿಡಿಸಿ, ಕಟೌಟ್ಗೆ ಹಾಲಿನ ಅಭಿಷೇಕ ಮಾಡಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ. 'ರಾಕಿಂಗ್ ಸ್ಟಾರ್ ಯಶ್' (Yash) ಅವರ ಬಹುನಿರೀಕ್ಷಿತ ಗ್ಯಾಂಗ್ಸ್ಟರ್ ಕಹಾನಿ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಇಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳನ್ನು ಅಪ್ಪಳಿಸಿದೆ. ಪಟಾಕಿ ಸಿಡಿಸಿ, ಹಾರ ಹಾಕಿ ಸಂಭ್ರಮಾಚರಣೆ ಮುಗಿಲು ಮುಟ್ಟಿಸಿದ್ದಾರೆ ಫ್ಯಾನ್ಸ್,. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಿನಿಮಾಗೆ ಬೇಡಿಕೆ ಸೃಷ್ಟಿ ಆಗಿದೆ.