ಮೈಸೂರು: ಮೈಸೂರು ದಕ್ಷಿಣ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿಪಿ) ಎಂ.ಪುಟ್ಟಮಾದಯ್ಯ ಗುರುವಾರ ಅಧಿಕಾರ ಸ್ವೀಕರಿಸಿದರು.ಈ ಹುದ್ದೆಯಲ್ಲಿದ್ದ ಡಾ. ಎಂ.ಬಿ.ಬೋರಲಿಂಗಯ್ಯ ಅವರನ್ನು ಬೆಂ. ಎಂ.ಬಿ.ಬೋರಲಿಂಗಯ್ಯ ಅವರನ್ನು ಬೆಂಗಳೂರು ನಗರ(ಉತ್ತರ)ದ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ತೆರವಾಗಿರುವ ಈ ಸ್ಥಾನಕ್ಕೆ ಮೈಸೂರು ಮೂಲದವರನ್ನು ನೇಮಕ ಮಾಡಲಾಗಿದೆ.ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಅವರು ನೂತನ ಡಿಐಜಿಪಿಯನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಅಧಿಕಾರಿ, ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು.ಎಂ.ಪುಟ್ಟಮಾದಯ್ಯ ಅವರು ತಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿಯ ಹೊಸಕುಕ್ಕೂರು ಗ್ರಾಮದವರು.