ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪೂರಕವೆಂಬಂತೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಾಸ್, ಇಂದು (ನವೆಂಬರ್ 20) ಹೈಕಮಾಂಡ್ ನಾಯಕರ ಭೇಟಿ ದಿಢೀರ್ ದೆಹಲಿಗೆ ತೆರಳಿದ್ದಾರೆ. ಪಕ್ಷ ಸಂಘಟನೆ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಸಚಿವ ಸ್ಥಾನ ವಂಚಿತ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಹೆಚ್.ಸಿ.ಮಹದೇವಪ್ಪ ಅವರನ್ನು ಕೆಪಿಸಿಸಿ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಲು ಹರಿಪ್ರಸಾದ್ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ.