ನೇಪಾಳದ ಪ್ರಧಾನಮಂತ್ರಿ ಬಾಲೇಂದ್ರ ಶಾ (ಬಾಲೇನ್ ಶಾ) ನವೆಂಬರ್ 22ರಂದು 2 ದಿನಗಳ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ನಡೆಯುತ್ತಿರುವ ಈ ಭೇಟಿಯು, ಮಾರ್ಚ್ 27ರಂದು ಅಧಿಕಾರ ವಹಿಸಿಕೊಂಡ ನಂತರ ಬಾಲೆನ್ ಶಾ ಅವರ ಮೊದಲ ದ್ವಿಪಕ್ಷೀಯ ವಿದೇಶಿ ಪ್ರವಾಸವಾಗಿದೆ. ಈ ಭೇಟಿಯ ವೇಳೆ ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ಧಿ, ಮೂಲಸೌಕರ್ಯ, ಇಂಧನ ಮತ್ತು ಬಾಹ್ಯಾಕಾಶ ಸೇರಿದಂತೆ ಹಲವು ಪ್ರಮುಖ ಒಪ್ಪಂದಗಳು ಏರ್ಪಡುವ ನಿರೀಕ್ಷೆಯಿದೆ.