ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 10ನೇ ತರಗತಿ ಪಾಸಾದವರಿಗೆ ಪಿಯೋನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳಿದ್ದು, ಪ್ರತಿ ತಿಂಗಳು 21,700 ರಿಂದ 46,650 ರೂ. ವೇತನ ಶ್ರೇಣಿ ಇರುತ್ತದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಡಿಸೆಂಬರ್ 04ರೊಳಗೆ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ಬಳಸಿಕೊಳ್ಳಿ. ವಿಜಯಪುರ ಜಿಲ್ಲಾ ನ್ಯಾಯಾಲಯವು 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವನ್ನು ಒದಗಿಸಿದೆ. ಇಲಾಖೆಯಲ್ಲಿ ಖಾಲಿ ಇರುವ 30 ಸೇವಕ(Peon) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.