ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಅಮೆರಿಕದಲ್ಲಿ ಹಣದುಬ್ಬರ ನಿಯಂತ್ರಿಸಲು ಬಡ್ಡಿದರ ಹೆಚ್ಚಳದ ನಿರೀಕ್ಷೆಯೇ ಇದಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಹೇಳುತ್ತಾರೆ. ಬಡ್ಡಿದರ ಏರಿಕೆಯಿಂದ ಹೂಡಿಕೆದಾರರು ಬಂಗಾರವನ್ನು ಮಾರಾಟ ಮಾಡಿ ಬಾಂಡ್ಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಇದು ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡಿ ದರ ಇಳಿಕೆಗೆ ಕಾರಣವಾಗಿದೆ ಎನ್ನಲಾಗ್ತಿದೆ. ಬೆಂಗಳೂರು, ನವೆಂಬರ್ 20: ಚಿನ್ನದ ಬೆಲೆ ಗಣನೀಯವಾಗಿ ಇಳಿಕೆ ಕಂಡಿದ್ದು, ಚಿನ್ನದ ಪ್ರಿಯರಿಗೆ ಇದು ಸಿಹಿ ಸುದ್ದಿಯಾಗಿದೆ. ಯುದ್ಧದ ಸಮಯದಲ್ಲಿ ಪ್ರತಿ 10 ಗ್ರಾಂ ಚಿನ್ನಕ್ಕೆ ₹1,80,000 ತಲುಪಿದ್ದ ಬೆಲೆ ಈಗ ದಾಖಲೆಯ ಇಳಿಕೆ ಕಂಡಿದೆ.