ಮದುವೆಯ ಬಳಿಕ ರಶ್ಮಿಕಾ ಮಂದಣ್ಣ ತಮ್ಮ ಸಿನಿಮಾ ಆಯ್ಕೆಯನ್ನು ಬದಲಾವಣೆ ಮಾಡಿಕೊಂಡಿದ್ದಾರೆ. ವಿಶೇಷವಾಗಿ ಹೆಚ್ಚು-ಹೆಚ್ಚು ಮಹಿಳಾ ಪ್ರಧಾನ ಸಿನಿಮಾಗಳತ್ತ ಗಮನ ಹರಿಸುತ್ತಿದ್ದಾರೆ. ಅದರ ಭಾಗವಾಗಿಯೇ ‘ಮೈಸಾ’ ಎಂಬ ಮಹಿಳಾ ಪ್ರಧಾನ ಆಕ್ಷನ್ ಸಿನಿಮಾನಲ್ಲಿ ರಶ್ಮಿಕಾ ನಟಿಸಿದ್ದು, ಈ ಸಿನಿಮಾಕ್ಕಾಗಿ ಸಾಕಷ್ಟು ಶ್ರಮ ಹಾಕಿ ಚಿತ್ರೀಕರಣ ಸಹ ಮಾಡಿದ್ದಾರೆ ರಶ್ಮಿಕಾ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಟನೆಯ ‘ರಣಬಾಲಿ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ಸಿನಿಮಾ ಸಾಧಾರಣ ಕಲೆಕ್ಷನ್ ಅನ್ನು ಚಿತ್ರಮಂದಿರಗಳಲ್ಲಿ ಮಾಡಿತ್ತು. ಮದುವೆಯ ಬಳಿಕ ರಶ್ಮಿಕಾ ತಮ್ಮ ಸಿನಿಮಾ ಆಯ್ಕೆಯನ್ನು ಬದಲಾವಣೆ ಮಾಡಿಕೊಂಡಿದ್ದಾರೆ.