ಕರ್ನಾಟಕದಲ್ಲಿ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿರುವ ಬೈಕ್ ಟ್ಯಾಕ್ಸಿ ಸೇವೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರಿಂಕೋರ್ಟ್ ಎತ್ತಿಹಿಡಿದು ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ. ಇದರೊಂದಿಗೆ ಸುಪ್ರೀಂಕೋರ್ಟ್ ತೀರ್ಪಿನಿಂದ ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರು, (ನವೆಂಬರ್ 20): ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.