ಕಾವೇರಿ ಜಲ ವಿವಾದ ಸಂಬಂಧ ತಮಿಳುನಾಡಿನ ಎರಡು ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವ ನಡುವೆಯೇ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ಶಾಕ್ ನೀಡಿದೆ. ಮುಂದಿನ 15 ದಿನಗಳ ಕಾಲ ನಿತ್ಯ 2000 ಕ್ಯೂಸೆಕ್ ನೀರು ಹರಿಸಲು ಶಿಫಾರಸು ಮಾಡಿದೆ. CWRC 147ನೇ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ನವದೆಹಲಿ, ನವೆಂಬರ್ 20: ಕರ್ನಾಟಕದಿಂದ ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವ ನಡುವೆಯೇ ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ CWRC ಶಿಫಾರಸು ಮಾಡಿದೆ.