ಬೆಂಗಳೂರು: ಎತ್ತಿನಹೊಳೆ ಯೋಜನೆ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಹಳೆಯ ಹೇಳಿಕೆ ಇದೀಗ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಎತ್ತಿನಹೊಳೆ ಯೋಜನೆ ಸಾಕಾರಗೊಂಡರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಇದೀಗ ಈ ಹೇಳಿಕೆಯನ್ನು ನೆನಪಿಸಿರುವ ಸಚಿವ ಎನ್. ಚೆಲುವರಾಯಸ್ವಾಮಿ, ಯೋಜನೆ ಸಾಕಾರಗೊಳ್ಳುತ್ತಿರುವಾಗ ಎಚ್ಡಿಕೆ ತಮ್ಮ ಮಾತಿನಂತೆ ನಡೆದುಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ವಿಕಾಸಸೌಧದ. ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ಕಾಮಗಾರಿ ಸ್ಥಳಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ, ಮಣ್ಣಿನ ಗುಣಮಟ್ಟ, ತಾಂತ್ರಿಕ ಪ್ರಕ್ರಿಯೆಯನ್ನು ಪರಿಶೀಲಿಸಿದರು.