ಬೆಂಗಳೂರು : ಲೇಖಕ ರವಿ ಹಂಜ್ ಅವರು ರಚಿಸಿರುವ ಬಸವ ಮಂಟಪ ಕೃತಿಯ ವಿವಾದಕ್ಕೆ ಸಂಬಂಧಪಟ್ಟಂತೆ ವೀರಶೈವ ಲಿಂಗಾಯತ ಸಮಾಜದ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.ವಿಜಯನಗರದಲ್ಲಿರುವ ಶ್ರೀಬಸವೇ. ಪರಮಶಿವಯ್ಯ, ಮಾಜಿ ಉಪಮೇಯರ್ ಬಿ.ಎಸ್.ಪುಟ್ಟರಾಜು ಹಾಗೂ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೃತಿಯ ವಿಚಾರವಾಗಿ ಚರ್ಚಿಸಿ, ಸಮಾಜದ ಭಾವನೆಗಳಿಗೆ ಧಕ್ಕೆ ತರುವ ಅಂಶಗಳನ್ನು ಪ್ರಕಟಿಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ಹಿರಿಯರಾದ ಬಿ.ಎಸ್.ಪರಮಶಿವಯ್ಯ, 12ನೇ ಶತಮಾನದಲ್ಲಿ ಬಸವಣ್ಣನವರು ಸಾರಿದ ಸಮಾನತೆ, ಕಾಯಕ, ದಾಸೋಹ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳು ಇಡೀ ಜಗತ್ತಿಗೆ ಮಾದರಿಯಾಗಿವೆ.