ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮಾಸಿಕ ₹15,000 ಗೌರವಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಬೆಂಗಳೂರು: ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮುಂದುವರಿದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ಕೊರೆಯುವ ಚಳಿಯಲ್ಲೂ ಹೋರಾಟ (ASHA workers protest) ಮುಂದುವರಿಸಿದ್ದಾರೆ.