ಉಡುಪಿ: ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಊಟೋಪಚಾರ ಹಾಗೂ ಇತರ ವ್ಯವಸ್ಥೆಗಳಿಗಾಗಿ ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿಯನ್ನು ಬಳಕೆ ಮಾಡುವಂತೆ ಸರ್ಕಾರ ಸೂಚಿಸಿರುವ ಕ್ರಮಕ್ಕೆ ಮಾಜಿ ಸಚಿವ, ಶಾಸಕ ವಿ. ಸುನೀಲ್ ಕುಮಾರ್, ಶಾಸಕ ಯಶ್ಪಾಲ್ ಸುವರ್ಣ ಸಹಿತ ವಿರೋಧ ಪಕ್ಷದ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 24ರಂದು ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನ. 17ರಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದು, ಸಮಾವೇಶಕ್ಕೆ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 50 ಮಂದಿ ಫಲಾನುಭವಿಗಳನ್ನು ಕರೆತರುವುದರ ಜೊತೆಗೆ, ಊಟೋಪಚಾರಕ್ಕೆ ತಗಲುವ ವೆಚ್ಚವನ್ನು ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿಯಿಂದ ಭರಿಸಲು.