ಸಿಎಂ ಡಿಕೆ ಶಿವಕುಮಾರ್ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಂಗಳೂರಿನಲ್ಲಿ ಐದು ಹೊಸ ಪೊಲೀಸ್ ಕಮಿಷನರೇಟ್ಗಳ ಸ್ಥಾಪನೆ ಕುರಿತು ಚರ್ಚಿಸಿದ್ದಾರೆ. ಉತ್ತಮ ಆಡಳಿತ, ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ದೇಶನ ನೀಡಿದ್ದಾರೆ. ಜೊತೆಗೆ ಭ್ರಷ್ಟಾಚಾರ ಮತ್ತು ರಿಯಲ್ ಎಸ್ಟೇಟ್ ದಂಧೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿರುವ ಸಿಎಂ, ಪರೀಕ್ಷಾ ಅಕ್ರಮ ತಡೆಯಲು ಮತ್ತು ಡ್ರಗ್ಸ್ ಮುಕ್ತ ಬೆಂಗಳೂರಿಗೆ ಶ್ರಮಿಸಲು ಕರೆ ನೀಡಿದ್ದಾರೆ. ಬೆಂಗಳೂರು, ನವೆಂಬರ್ 20: ಬೆಂಗಳೂರಿಗೆ ಐದು ಕಮಿಷನರ್ ನೇಮಕ ಬೆನ್ನಲ್ಲೇ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ, ಬೆಂಗಳೂರು ನಗರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಭೆ ಮಾಡಿದ್ದು, ನಗರದ ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ.