ಹಿಂದೂ ಧಾರ್ಮಿಕ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಯುವುದನ್ನು ಪ್ರಶ್ನಿಸಿ ಹಾಗೂ ದೇಶದ ಶೇ.80ರಷ್ಟು ಜನಸಂಖ್ಯೆ ಹೊಂದಿರುವ ಹಿಂದೂಗಳೂ ಕಲ್ಲು ತೂರಲು ಶುರುಮಾಡಿದರೆ ಏನಾಗಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಹೈಕೋರ್ಟ್ ನಲ್ಲಿಹಿನ್ನಡೆಯಾಗಿದೆ. ಇನ್ನು ಇದೇ ಪ್ರಕರಣದಲ್ಲಿ ಮೂವರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣದ ವಿವರ ಇಲ್ಲಿದೆ. ಬೆಂಗಳೂರು, (ನವೆಂಬರ್ 20) : ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.