ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ ತಪ್ಪು ಮಾಹಿತಿ ನೀಡಿ ಫಾರಂ 7 ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಬಿಜೆಪಿ ಶಾಸಕರ ವಿರುದ್ಧದ ತನಿಖೆ ತಡೆಗೆ ಹೈಕೋರ್ಟ್ ನಕಾರ ಎತ್ತಿದೆ. ತನಿಖೆಗೆ ಸಹಕರಿಸಲು ಅರ್ಜಿದಾರರಿಗೆ ಹೈಕೋರ್ಟ್ ತಿಳಿಸಿದ್ದು, ಆದರೆ ಅರ್ಜಿದಾರರನ್ನು ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಬೆಂಗಳೂರು, ನವೆಂಬರ್ 20: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ ತಪ್ಪು ಮಾಹಿತಿ ನೀಡಿ ಫಾರಂ 7 ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಯನಗರ ಬಿಜೆಪಿ ಶಾಸಕ ಸಿಕೆ ರಾಮಮೂರ್ತಿ ವಿರುದ್ಧದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣದ ತನಿಖೆಗೆ ಸಹಕರಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚನೆ ನೀಡಿದೆ.