ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ಬಿಬಿಎಂಪಿ ಶಾಲೆಯೊಂದರ ಬಳಿ ಪತ್ತೆಯಾಗಿದ್ದ ಅಸ್ಥಿಪಂಜರ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ಎರಡನೇ ಪತಿ ಪತ್ನಿಯನ್ನ ಕೊಲೆ ಮಾಡಿ ಬಳಿಕ ಮೃತದೇಹವನ್ನು ಮುಚ್ಚಿಟ್ಟಿದ್ದ. ಸದ್ಯ ಕೊಡಿಗೆಹಳ್ಳಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು, ನವೆಂಬರ್ 20: ನಗರದಲ್ಲಿ ಕಳೆದ 15 ದಿನಗಳ ಹಿಂದೆ ಪತ್ತೆಯಾಗಿದ್ದ ಒಂದು ಅಸ್ಥಿಪಂಜರದ ಹಿಂದಿನ ಕೊಲೆಯ ರಹಸ್ಯವನ್ನು ಕೊಡಿಗೆಹಳ್ಳಿ ಪೊಲೀಸರು ಪತ್ತೆಹಚ್ಚಿದ್ದಾರೆ. ಪತ್ನಿಯ ಅಕ್ರಮ ಸಂಬಂಧದ ಕಾರಾಣಕ್ಕೆ ಎರಡನೇ ಪತಿಯಿಂದ ಹತ್ಯೆ ನಡೆದಿದೆ ಎಂಬ ಆಘಾತಕಾರಿ ವಿಚಾರವೊಂದು ಗೊತ್ತಾಗಿದೆ. ಪತಿ ಫಯಾಜ್ ಪಾಷಾ ಪತ್ನಿ ಸುಜಾತಾಳನ್ನು ಹತ್ಯೆ ಮಾಡಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.