ಮಂಡ್ಯದ ಮಹಾವೀರ ಸರ್ಕಲ್ನಲ್ಲಿ ಅಬ್ದುಲ್ ಸತ್ತಾರ್ ಎಂಬಾತ KSRTC ಬಸ್ ತಡೆದು 'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ಘಟನೆಯಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದ ಆರೋಪದ ಮೇಲೆ ಮಂಡ್ಯ ಪೂರ್ವ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಡ್ಯ, ನವೆಂಬರ್ 20: ನಗರದ ಮಹಾವೀರ ವೃತ್ತದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಏಕಾಏಕಿ ಬಸ್ ಮುಂದೆ ನಿಂತು ಘೋಷಣೆ ಕೂಗಿದ್ದ ಯುವಕನ ವರ್ತನೆಯಿಂದ ಕೆಲಕಾಲ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.