2026ರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ಎ ತಂಡ ನೇಪಾಳವನ್ನು 306 ರನ್ಗಳಿಂದ ಭರ್ಜರಿಯಾಗಿ ಮಣಿಸಿದೆ. ಪ್ರಿನ್ಸ್ ಯಾದವ್ ಕೇವಲ 6 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು, ನೇಪಾಳ ತಂಡವನ್ನು 26 ರನ್ಗಳಿಗೆ ಆಲೌಟ್ ಮಾಡಿದರು. ಇದು ಅವರ ಮೊದಲ ಲಿಸ್ಟ್ ಎ 5 ವಿಕೆಟ್ ಸಾಧನೆಯಾಗಿದೆ. ಭಾರತ ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. 2026ರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯ ಮೊದಲ ಪಂದ್ಯದಲ್ಲೇ ಭಾರತ ಎ ತಂಡ ಭರ್ಜರಿ ಪ್ರದರ್ಶನ ನೀಡಿದೆ. ನೇಪಾಳ ತಂಡವನ್ನು ಬರೋಬ್ಬರಿ 306 ರನ್ಗಳಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.