ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆ ಸಂಚು ಆರೋಪಕ್ಕೆ ಸಂಬಂಧಿಸಿದ ಸಿವಿಲ್ ಪ್ರಕರಣದಲ್ಲಿ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಭಾರತೀಯ ಅಧಿಕಾರಿಗಳಿಗೆ ಅಮೆರಿಕದ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿರುವುದನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದ್ದು, ಇದೊಂದು ‘ಸಂಪೂರ್ಣ ಆಧಾರರಹಿತ ದಾವೆ’ ಎಂದು ತಳ್ಳಿಹಾಕಿದೆ. ಅಮೆರಿಕದ ನ್ಯೂಯಾರ್ಕ್ನ ದಕ್ಷಿಣ ಜಿಲ್ಲಾ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯ, "ಈ ಪ್ರಕರಣವು ಸಂಪೂರ್ಣವಾಗಿ ಆಧಾರರಹಿತ ಮತ್ತು ಅಸಮರ್ಥನೀಯ ಆರೋಪಗಳನ್ನು ಒಳಗೊಂಡಿದೆ" ಎಂದು ಸ್ಪಷ್ಟಪಡಿಸಿದೆ.