ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ್ದ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ, ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಈ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ ಮಹತ್ವದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಬೆಂಗಳೂರು, (ನವೆಂಬರ್ 20): ಬೈಕ್ ಟ್ಯಾಕ್ಸಿಯನ್ನೇ ನಂಬಿಕೊಂಡ ರೈಡರ್ ಗಳಿಗೆ ಶುಭ ಸುದ್ದಿ ಸಿಕ್ಕಿದೆ. ಇನ್ಮುಂದೆ ಕದ್ದು ಮುಚ್ಚಿ ಬೈಕ್ ಟ್ಯಾಕ್ಸಿಯಲ್ಲಿ ಓಡಾಬೇಕಾಗಿಲ್ಲ. ಯಾಕಂದ್ರೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.