ಗಾಂಧಿ ಹತ್ಯೆಯ ಸತ್ಯ ನಾಟಕ ಪ್ರದರ್ಶನಕ್ಕೆ ಭದ್ರತೆ ಕೋರಿ ಅಡ್ಡಂಡ ಕಾರ್ಯಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರದರ್ಶನ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಾಟಕ ಪ್ರದರ್ಶನದ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಪೂರ್ವ ಮಾಹಿತಿ ನೀಡುವಂತೆ ಅರ್ಜಿದಾರರಿಗೂ ನ್ಯಾಯಪೀಠ ಸೂಚಿಸಿದೆ. ಬೆಂಗಳೂರು, ನವೆಂಬರ್ 20: ‘ಗಾಂಧಿ ಹತ್ಯೆಯ ಸತ್ಯ’ ನಾಟಕದ ಮುಂದಿನ ಪ್ರದರ್ಶನಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನಾಟಕ ಪ್ರದರ್ಶನ ನಡೆಯುವ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.