ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೊದಲು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಪತ್ನಿ ಕೂಡ ನೇಣು ಬಿಗಿದುಕೊಂಡಿದ್ದಾರೆ. ಸದ್ಯ ಘಟನೆ ಸಂಬಂಧ FIR ದಾಖಲಾಗಿದ್ದು, ಮುಧೋಳ ಪೊಲೀಸರು ತನಿಖೆ ನಡೆಸಿದ್ದಾರೆ. ಬಾಗಲಕೋಟೆ, ನವೆಂಬರ್ 20: ಕೌಟುಂಬಿಕ ಕಲಹ ಹಿನ್ನೆಲೆ ಪತಿ ಮತ್ತು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದಲ್ಲಿ ನಡೆದಿದೆ. ಅಪ್ಪಾಶಿ ಶಿವಪ್ಪ ನಡುವಿನಮನಿ (35) ಮತ್ತು ರಾಜೇಶ್ವರಿ ನಡುವಿನಮನಿ (30) ಮೃತಪಟ್ಟ ದಂಪತಿ. ಗುರುವಾರ ರಾತ್ರಿ ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.