ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ರಲ್ಲಿ ನೇಪಾಳ ವಿರುದ್ಧ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಕುಮಾರ್ ಕುಶಾಗ್ರ ಜೊತೆ 206 ರನ್ಗಳ ಮಹತ್ವದ ಜೊತೆಯಾಟವಾಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಆರಂಭಿಕ ಆಘಾತದ ನಂತರ ಈ ಜೋಡಿ ಎಚ್ಚರಿಕೆಯ ಆಟ ಪ್ರದರ್ಶಿಸಿ ಬೃಹತ್ ಮೊತ್ತಕ್ಕೆ ಕಾರಣವಾಯಿತು, ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ. ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026ರ ಮೊದಲ ಲೀಗ್ ಪಂದ್ಯದಲ್ಲಿ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ನೇಪಾಳ ವಿರುದ್ಧ ನಾಯಕನ ಆಟ ಪ್ರದರ್ಶಿಸಿದ್ದಾರೆ.